ಬೆಂಗಳೂರು: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಜನವರಿಯಿಂದ 5 ಲಕ್ಷ ಪದವೀಧರರ ಖಾತೆಗಳಿಗೆ ಹಣ ಜಮೆಯಾಗಲಿದೆ.
ವೈದ್ಯಕೀಯ ಶಿಕ್ಷಣ, ಕೌಶಾಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದು ತಿಳಿಸಿದ್ದಾರೆ.
https://twitter.com/S_PrakashPatil/status/1734519900956393887