
ಯುವರಾಜ್ ಕುಮಾರ್ ಅಭಿನಯದ ಚೊಚ್ಚಲ ಚಿತ್ರ ‘ಯುವ’ ನಾಳೆ ರಾಜ್ಯಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ಈಗಾಗಲೇ ತನ್ನ ಟ್ರೈಲರ್ ಮತ್ತು ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನಾಳೆ ತೆರೆ ಕಾಣಲಿದೆ.
ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಯುವರಾಜ್ ಕುಮಾರ್ ಮತ್ತು ಸಪ್ತಮಿ ಗೌಡ ಮುಖ್ಯ ಭೂಮಿಕೆಯಲ್ಲಿದ್ದು, ಅಚ್ಯುತ್ ಕುಮಾರ್, ಪ್ರಕಾಶ್ ರಾಜ್, ಸಂದೀಪ್ ಮಲಾನಿ, ಸುಧಾರಾಣಿ, ಕಿಶೋರ್, ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ. ಆಶಿಕ್ ಸಂಕಲನ, ಮತ್ತು ಶ್ರೀಶ ಕುಡುವಳ್ಳಿ ಛಾಯಾಗ್ರಹಣವಿದೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ .