ಶಿವಮೊಗ್ಗ: ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯನ್ನು 2024ರ ಜನವರಿಯಿಂದ ಜಾರಿಗೊಳಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ರಾಜ್ಯ ಕೌಶಲ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಡಿಪ್ಲೋಮಾ ಪೂರ್ಣಗೊಳಿಸಿದವರಿಗೆ 1500 ರೂ., ಪದವಿ ಪೂರ್ಣಗೊಳಿಸಿದವರಿಗೆ 3000 ರೂ. ಹಣವನ್ನು ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಲಾಗುವುದು. ಜನವರಿಯಿಂದ ಯುವ ನಿಧಿ ಯೋಜನೆ ಜಾರಿಯಾಗಲಿದೆ ಎಂದು ಹೇಳಿದ್ದಾರೆ.
ಓದು ಮುಗಿಸಿ, ತಕ್ಷಣ ಕೆಲಸ ಸಿಗದೆ ಮನೆಯಲ್ಲಿರುವ ವಿದ್ಯಾರ್ಥಿಗಳು ತಂದೆ-ತಾಯಿಗಳಿಗೆ ಹೊರೆಯಾಗದಿರಲೆಂದು ಹಾಗೂ ತಮ್ಮ ಸಣ್ಣ ಪುಟ್ಟ ಖರ್ಚುಗಳು, ಉದ್ಯೋಗ ಹುಡುಕಲು ಅನುಕೂಲವಾಗಲೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಯುವನಿಧಿ ಯೋಜನೆಯನ್ನು ಬರುವ ಜನವರಿಯಿಂದ ಜಾರಿಗೆ ತರಲಾಗುವುದು. ಡಿಪ್ಲೊಮಾ ಮುಗಿಸಿದವರಿಗೆ 1500 ರೂ. ಹಾಗೂ ಪದವಿ ಮುಗಿಸಿದವರಿಗೆ 3000 ರೂ. ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದರು.