ಬೆಂಗಳೂರು : ಡಿಪ್ಲೋಮಾ ಹಾಗೂ ಪದವೀಧರ ನಿರುದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಯುವನಿಧಿ ಯೋಜನೆಯನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 5 ಗ್ಯಾರಂಟಿಗಳ ಪೈಕಿ ಈಗಾಗಲೇ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮೀ ಯೋಜನೆಗೆ ಆ.16 ಕ್ಕೆ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ನಿರುದ್ಯೋಗಿ ಡಿಪ್ಲೋಮಾ, ಪದವೀಧರರ ಯುವಕರಿಗೆ 24 ತಿಂಗಳ ಕಾಲತಲಾ 1,500 ಹಾಗೂ 3,000 ರೂ. ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.