ಬೆಂಗಳೂರು: ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಮಾನದಂಡ ಪ್ರಕಟಿಸಿದೆ. ಪದವಿ, ಡಿಪ್ಲೋಮಾ ಮುಗಿಸಿ ಆರು ತಿಂಗಳಾದರೂ ಉದ್ಯೋಗ ಸಿಗದ ಕನ್ನಡಿಗರು ಮಾತ್ರ ಯುವನಿಧಿ ಯೋಜನೆಗೆ ಅರ್ಹರಾಗಿರುತ್ತಾರೆ.
ಎರಡು ವರ್ಷಗಳ ಅವಧಿಗೆ ಮಾತ್ರ ಯುವನಿಧಿ ಯೋಜನೆಗೆ ಭತ್ಯೆ ಪಡೆಯಬಹುದು. ಎರಡು ವರ್ಷದೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗಳಿಗೆ ಸೌಲಭ್ಯ ಸ್ಥಗಿತಗೊಳಿಸಲಾಗುತ್ತದೆ. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಫಲಾನುಭವಿಗಳಿಗೆ ಡಿಬಿಟಿ ಮೂಲಕ ಭತ್ಯೆ ನೀಡಲಾಗುವುದು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಮಾಡಿದರೆ ದಂಡ ವಿಧಿಸಲಾಗುತ್ತದೆ.
ಪದವಿ, ಡಿಪ್ಲೋಮಾ ಬಳಿಕ ಉನ್ನತ ವ್ಯಾಸಂಗ ಮುಂದುವರೆಸುವವರಿಗೆ ಭತ್ಯೆ ನೀಡುವುದಿಲ್ಲ. ಅಪ್ರೆಂಟಿಸ್ ಮಾಡುತ್ತಿರುವವರಿಗೆ ಯುವನಿಧಿ ಭತ್ಯೆ ನೀಡುವುದಿಲ್ಲ ಎಂದು ಹೇಳಲಾಗಿದೆ.