ಬೆಂಗಳೂರು: ಯುವನಿಧಿ ಯೋಜನೆ ನೋಂದಣಿ ಆರಂಭವಾದ ಒಂದು ವಾರದಲ್ಲಿ 19,392 ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ.
ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ನೋಂದಣಿ ಆರಂಭವಾದ ಸಂದರ್ಭದಲ್ಲಿ ತಾಂತ್ರಿಕ ಕಾರಣಗಳಿಂದ ಮಂದಗತಿಯಲ್ಲಿದ್ದ ನೋಂದಣಿ ಈಗ ಚುರುಕುಗೊಂಡಿದ್ದು, ಒಂದೇ ವಾರದಲ್ಲಿ 19,392 ಮಂದಿ ನೋಂದಾಯಿಸಿಕೊಂಡಿದ್ದಾರೆ.
ಬೆಳಗಾವಿಯಲ್ಲಿ 2,316, ಬೆಂಗಳೂರಿನಲ್ಲಿ 1974 ಮಂದಿ ನಿರುದ್ಯೋಗ ಭತ್ಯೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ 54 ಅರ್ಜಿಗಳು ಸಲ್ಲಿಕೆಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಕನಿಷ್ಠ 100ರಿಂದ ಗರಿಷ್ಠ 900 ಪದವೀಧರರು ನೋಂದಾಯಿಸಿಕೊಂಡಿದ್ದಾರೆ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದ್ದಾರೆ.