ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಜೆಡಿಎಸ್ ನ ಹಲವು ಅಲ್ಪಸಂಖ್ಯಾತ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯಕದರ್ಶಿ ಜಫ್ರುಲ್ಲ ಖಾನ್ ಮೈತ್ರಿಗೆ ಬೆಂಬಲ ಘೋಷಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ವಿಚಾರವಾಗಿ ಮಾತನಾಡಿದ ಜಫ್ರುಲ್ಲ ಖಾನ್, ಹೆಚ್.ಡಿ.ದೇವೇಗೌಡರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ರಾಜಕಾರಣ ನಿಂತ ನೀರಲ್ಲ. ಹಾಗಾಗಿ ವರಿಷ್ಠರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದರು. ಜಾತ್ಯಾತೀತ ಸಿದ್ಧಾಂತ ಇಟ್ಟುಕೊಂಡು ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಇದರಿಂದ ಯಾವ ಮುಸ್ಲಿಂ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಜೆಡಿಎಸ್ ನಿಂದ ದೂರ ಹೋಗಲ್ಲ. ಕೆಲವರಿಗೆ ಅಸಮಾಧಾನವಿರಬಹುದು. ಆದರೆ ಅದು ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು