
ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಸದ್ಯಕ್ಕೆ ಜಮೀರ್ ಅಹ್ಮದ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೊಸಪೇಟೆಯಲ್ಲಿ ಮಾತನಾಡಿದ ಅವರು, ಬಿ. ನಾಗೇಂದ್ರ ರಾಜೀನಾಮೆ ಬಳಿಕ ಉಸ್ತುವಾರಿ ಸಚಿವ ಸ್ಥಾನ ತೆರವಾಗಿತ್ತು. ಸದ್ಯಕ್ಕೆ ಜಮೀರ್ ಅಹ್ಮದ್ ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ.
ಬಳ್ಳಾರಿ, ವಿಜಯನಗರ ಜಿಲ್ಲೆಯ ಫಂಡ್ ಬಗ್ಗೆ ಗೊಂದಲವಿತ್ತು, ಎರಡು ಜಿಲ್ಲೆಗಳ ಡಿಎಂಎಫ್ ಫಂಡ್ ಬಗ್ಗೆ ಸ್ವಲ್ಪ ಗೊಂದಲವಿದ್ದು, ವಿಜಯನಗರದವರು ಶೇಕಡ 28ರಷ್ಟು ಬರಬೇಕು ಎನ್ನುತ್ತಿದ್ದಾರೆ. ಆದರೆ ಬಳ್ಳಾರಿ ಜಿಲ್ಲೆಯವರು ಇದನ್ನು ಒಪ್ಪುತ್ತಿಲ್ಲ. ಅದನ್ನು ಸರಿಯಾಗಿ ಪರಿಶೀಲನೆ ಮಾಡಲು ಹೇಳಿದ್ದೇನೆ. ಎಲ್ಲರೂ ಕುಳಿತು ಸರಿಯಾಗಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.