ಬೆಂಗಳೂರು: ಹಿಜಾಬ್ ಆಗದಿದ್ದರೆ ಅತ್ಯಾಚಾರ ಹೆಚ್ಚಾಗುತ್ತದೆ ಎಂದು ಹೇಳಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ತಮ್ಮ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕ್ಷಮೆಯಾಚಿಸಬೇಕು ಎಂದು ಹೇಳಿದ್ದರೂ ಕ್ಷಮೆಯಾಚಿಸುವಂತಹ ಹೇಳಿಕೆ ನೀಡಿಲ್ಲವೆಂದು ಜಮೀರ್ ಅಹಮದ್ ಸಮರ್ಥಿಸಿಕೊಂಡಿದ್ದರು. ಬಿಜೆಪಿಯ ತೀವ್ರ ಆಕ್ರೋಶ ಮತ್ತು ಕಾಂಗ್ರೆಸ್ ವರಿಷ್ಠರು ಹಾಗೂ ರಾಜ್ಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸೇರಿದಂತೆ ವಿಪಕ್ಷ, ಸ್ವಪಕ್ಷ ನಾಯಕರಿಂದ ವಿರೋಧ ವ್ಯಕ್ತವಾಗುತ್ತಲೇ ಕ್ಷಮೆಯಾಚಿಸಿದ್ದಾರೆ.
ಯಾರ ಮನಸ್ಸನ್ನು ನೋಯಿಸುವ ಅಥವಾ ಅಗೌರವ ತೋರುವ ಉದ್ದೇಶದಿಂದ ನಾನು ಅಂತಹ ಹೇಳಿಕೆ ನೀಡಿಲ್ಲ. ಹೆಣ್ಣುಮಕ್ಕಳ ಬಗ್ಗೆ ಕಾಳಜಿ ಉದ್ದೇಶದಿಂದ ಹೇಳಿಕೆ ನೀಡಿದ್ದು, ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಜಮೀರ್ ತಿಳಿಸಿದ್ದಾರೆ.