ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ರೋಬೋಟಿಕ್ ಆಪರೇಷನ್ ಮಾಡಲಾಗಿದೆ.
ಭುಜದ ನೋವಿನಿಂದಾಗಿ ಆಸರಾ ಸಮೂಹ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ತಜ್ಞ ವೈದ್ಯರಿಂದ ಅವರಿಗೆ ಭುಜದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. ಆಪರೇಷನ್ ಬಳಿಕ ಚೇತರಿಸಿಕೊಳ್ಲುತ್ತಿರುವ ಜಮೀರ್ ಅಹ್ಮದ್ ಅವರಿಗೆ ಎರಡು ದಿನಗಳ ಕಾಲ ವಿಶ್ರಾಂತಿಗೆ ವೈದ್ಯರು ಸೂಚನೆ ನೀಡಿದ್ದಾರೆ.