
ಹೊಸಪೇಟೆ: ಪ್ರತಿ ಜಿಲ್ಲೆಯಲ್ಲಿಯೂ ವಸತಿ ಇಲಾಖೆಗೆ ಸಂಬಂಧಿಸಿದಂತೆ ಜನಸ್ಪಂದನಾ ಕಾರ್ಯಕ್ರಮ ಆರಂಭಿಸಲಾಗುವುದು ಎಂದು ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 26 ರಿಂದ ಪ್ರತಿ ಜಿಲ್ಲೆಯಲ್ಲಿ ವಸತಿ ಇಲಾಖೆಗೆ ಸಂಬಂಧಿಸಿದಂತೆ ಜನಸ್ಪಂದನಾ ಕಾರ್ಯಕ್ರಮ ಆರಂಭಿಸಲಿದ್ದು, ಮಂಡ್ಯ ಜಿಲ್ಲೆಯಿಂದ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.
ಜನಸ್ಪಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಪ್ರತಿ ಜಿಲ್ಲೆಯಲ್ಲೂ ಕಾರ್ಯಕ್ರಮ ಆಯೋಜಿಸಿ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.