alex Certify ಕ್ಷಮೆ ಕೇಳುವಂತಹ ಹೇಳಿಕೆ ನೀಡಿಲ್ಲ: ಡಿಕೆಶಿಗೆ ಜಮೀರ್ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷಮೆ ಕೇಳುವಂತಹ ಹೇಳಿಕೆ ನೀಡಿಲ್ಲ: ಡಿಕೆಶಿಗೆ ಜಮೀರ್ ಟಾಂಗ್

ಹುಬ್ಬಳ್ಳಿ: ಹಿಜಾಬ್ ಬಗ್ಗೆ ನಾನು ಮಾತನಾಡುತ್ತೇನೆ. ನಾನು ಕ್ಷಮೆ ಕೇಳುವಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಶಾಸಕ ಜಮೀರ್ ಅಹಮದ್ ಹೇಳಿದ್ದಾರೆ.

ನಾನು ಯಾಕೆ ಕ್ಷಮೆಯಾಚಿಸಬೇಕು ಎಂದು ಅವರು ಪ್ರಶ್ನಿಸಿದ್ದಾರೆ. ಈ ಮೂಲಕ ಜಮೀರ್ ಅಹಮ್ಮದ್ ಕ್ಷಮೆಯಾಚಿಸಬೇಕು ಎಂದು ತಿಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಹಿಜಾಬ್ ಹಾಕಬೇಕು ಎಂದು ನಾನು ಹೇಳಿಕೆ ನೀಡಿದ್ದೆ. ಹೆಲ್ಮೆಟ್ ರೀತಿಯಲ್ಲೇ ಹಿಜಾಬ್ ಹಾಕಬೇಕು ಎಂದು ಹೇಳಿದ್ದೆ. ಹೆಲ್ಮೆಟ್ ಹೇಗೆ ಸೇಫ್ಟಿ ಕೊಡುತ್ತೋ ಹಾಗೆ ಹಿಜಾಬ್ ಸೇಫ್ಟಿ ನೀಡುತ್ತೆ. ಹಾಗಾಗಿ ಹಿಜಾಬ್ ಹಾಕಬೇಕೆಂದು ಹೇಳಿದ್ದೆ. ಹೆಲ್ಮೆಟ್ ಕಡ್ಡಾಯವಾಗಿದ್ದರೂ, ಕೆಲವು ಬೈಕ್ ಸವಾರರು ಹೆಲ್ಮೆಟ್ ಹಾಕುವುದಿಲ್ಲ. ಅದೇ ರೀತಿ ಬಹಳ ಜನ ಹಿಜಾಬ್ ಧರಿಸುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...