alex Certify ರಾಜ್ಯದ ಬಡ ಕುಟುಂಬಗಳಿಗೆ ಭರ್ಜರಿ ಗುಡ್ ನ್ಯೂಸ್: ತಿಂಗಳಾಂತ್ಯಕ್ಕೆ 38 ಸಾವಿರ ಮನೆ ಹಂಚಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಬಡ ಕುಟುಂಬಗಳಿಗೆ ಭರ್ಜರಿ ಗುಡ್ ನ್ಯೂಸ್: ತಿಂಗಳಾಂತ್ಯಕ್ಕೆ 38 ಸಾವಿರ ಮನೆ ಹಂಚಿಕೆ

ಬೆಂಗಳೂರು: ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರಾಜ್ಯದಲ್ಲೆಡೆ ಬಡ ಕುಟುಂಬಗಳಿಗೆ 38,000 ಮನೆಗಳನ್ನು ಈ ತಿಂಗಳಾಂತ್ಯಕ್ಕೆ ಅಥವಾ ಆಗಸ್ಟ್ ಮೊದಲ ವಾರ ಮನೆಗಳನ್ನು ಹಂಚಿಕೆ ಮಾಡಲಾಗುವುದು.

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿಧಾನಸೌಧದಲ್ಲಿ ಸೋಮವಾರ ಹಣಕಾಸು ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಅತೀಕ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಎರಡನೇ ಹಂತದ ಮನೆ ಹಂಚಿಕೆ ಮಾಡಲು ಅಗತ್ಯವಿರುವ 860 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ಸೂಚಿಸಲಾಗಿದೆ.

ಈಗಾಗಲೇ ಮನೆಗಳ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಮೂಲಸೌಕರ್ಯ ಕಾಮಗಾರಿಗಳನ್ನು ಶೀಘ್ರವೇ ಮುಗಿಸಿ ಮನೆಗಳ ಹಂಚಿಕೆಗೆ ದಿನಾಂಕ ನಿಗದಿಪಡಿಸಲು ತೀರ್ಮಾನಿಸಲಾಗಿದೆ.

ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 1,80,253 ಮನೆಗಳನ್ನು ನಿರ್ಮಿಸುತ್ತಿದ್ದು, ಕಳೆದ ಮಾರ್ಚ್ನಲ್ಲಿ 36,789 ಮನೆಗಳನ್ನು ಸಿಎಂ ಸಿದ್ದರಾಮಯ್ಯ ಹಂಚಿಕೆ ಮಾಡಿದ್ದರು. ಇದೀಗ ಎರಡನೇ ಹಂತದಲ್ಲಿ 38,000 ಮನೆಗಳನ್ನು ಮುಖ್ಯಮಂತ್ರಿಯವರಿಂದ ಹಂಚಿಕೆ ಮಾಡಲಾಗುವುದು ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದ್ದಾರೆ.

ವಸತಿ ಯೋಜನೆಗೆ ಆಯ್ಕೆಯಾಗಿದ್ದ ಬಡ ಕುಟುಂಬದವರು ಫಲಾನುಭವಿಗಳ ವಂತಿಗೆ ಪಾವತಿಸಲು ಸಾಧ್ಯವಾಗದೆ ಬ್ಯಾಂಕುಗಳಿಂದಲೂ ಸಾಲ ಸಿಗದೇ ಸಂಕಷ್ಟ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಫಲಾನುಭವಿಗಳ ವಂತಿಗೆಯನ್ನು ಸರ್ಕಾರವೇ ಭರಿಸುವ ದಿಟ್ಟ ತೀರ್ಮಾನ ಕೈಗೊಂಡು ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿದ್ದರು. ಅದರಂತೆ ಹಂತ ಹಂತವಾಗಿ ಹಣಕಾಸು ಇಲಾಖೆಯಿಂದ ಅಗತ್ಯ ಹಣ ಬಿಡುಗಡೆ ಮಾಡುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...