
ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ದಾಖಲಾಗಿದ್ದ ಕೇಸ್ ಗೆಕ್ಕೆ ಹೈಕೋರ್ಟ್ ತಡೆ ನೀಡಿದೆ.
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಜಮೀರ್ ಅಹ್ಮದ್ ಖಾನ್ ವಿರುದ್ಧ ನವಲಗುಂದ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇತ್ತೀಚೆಗೆ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಲ್ಲಿಸಲಾಗಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಜಮೀರ್ ಅಹ್ಮದ್ ಆಯ್ಕೆ ಪ್ರಶ್ನಿಸಿ ಅವರದ್ದೇ ಕ್ಷೇತ್ರದ ಮತದಾರರೊಬ್ಬರು ಅರ್ಜಿ ಸಲ್ಲಿಸಿದ್ದರು.
ಇದೀಗ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ಏಕಸದಸ್ಯ ಪೀಠ, ಜಮೀರ್ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ.