ದಾವಣಗೆರೆ: ನನಗೆ ಎಐಸಿಸಿಯಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್, ನಾನು ಯಾವ ಜಾತಿಯ ಬಗ್ಗೆಯೂ ಮಾತನಾಡಿಲ್ಲ. ಒಂದು ಜಾತಿಯ ಮತ ಪಡೆದು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಎಲ್ಲ ಜಾತಿಯವರನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದೇನೆ ಅಷ್ಟೇ ಎಂದರು.
ಇದುವರೆಗೂ ನನಗೆ ಎಐಸಿಸಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ಬಂದಿದ್ದರೆ ನನಗೆ ತಲುಪುತ್ತಿತ್ತು. ಅಷ್ಟಕ್ಕೂ ನೋಟಿಸ್ ಕೊಡುವಂತಹುದನ್ನು ನಾನೇನು ಮಾಡಿದ್ದೇನೆ ಎಂದು ಪ್ರಶ್ನಿಸಿದ್ದಾರೆ.