ಬೆಂಗಳೂರು: ಚಿಕ್ಕಮಗಳೂರು, ಕೋಲಾರ ಸೇರಿದಂತೆ ವಿವಿಧೆಡೆ ಪ್ಯಾಲೆಸ್ಟೈನ್ ಧ್ವಜ ಹಿಡಿದು ಕಿಡಿಗೇಡಿಗಳ ಓಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದು, ಧ್ವಜ ಹಿಡಿದರೆ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಪ್ಯಾಲೆಸ್ಟೈಲ್ ಧ್ವಜ ಹಿಡಿದುಕೊಂಡರೆ ತಪ್ಪೇನಿಲ್ಲ. ಯಾಕೆಂದರೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹಾಗಾಗಿ ಧ್ವಜ ಹಿಡಿದ ಮಾತ್ರಕ್ಕೆ ತಪ್ಪಿಲ್ಲ. ಅದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಪ್ಯಾಲೆಸ್ಟೈನ್ ಗೆ ಬೆಂಬಲ ಘೋಷಿಸಿದ್ದಕ್ಕೆ ಪ್ಯಾಲೆಸ್ಟೈನ್ ಧ್ವಜ ಹಿಡಿದಿದ್ದಾರೆ. ಇಲ್ಲದಿದ್ದರೆ ಹೀಗಾಗುತ್ತಿರಲಿಲ್ಲ. ಬೇರೆ ದೇಶದ ಪರ ಘೋಷಣೆ ಕೂಗಿದರೆ ಅದು ತಪ್ಪು. ಹಾಗೆ ಮಾಡುವವರು ದೇಶದ್ರೋಹಿಗಳು. ಅಂಥವರನ್ನು ಗಲ್ಲಿಗೇರಿಸಬೇಕು. ಹಾಗೆಂದು ಧ್ವಜ ಹಿಡಿದರೆ ತಪ್ಪಿಲ್ಲ ಎಂದು ಹೇಲಿದರು.