ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್, ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ. 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಸಿಎಂ ಆಗಬೇಕು ಅಂತಾ ಎಲ್ಲಾ ಜಾತಿಯವರಿಗೂ ಆಸೆ ಇರುತ್ತೆ. ದಲಿತರಿಗೆ, ಮುಸ್ಲಿಮರಿಗೆ, ಒಕ್ಕಲಿಗರಿಗೆ ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇದೆ. ಆದರೆ ಈ ಐದು ವರ್ಷದ ಅವಧಿ ಸಿಎಂ ಹುದ್ದೆ ಖಾಲಿಯಿಲ್ಲ. ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದರು.
ಸಿಎಂ ಕುರ್ಚಿಯಲ್ಲಿ ಟಗರು ಗಟ್ಟಿಯಾಗಿ ಕುಳಿತುಕೊಂಡಿದೆ. ಟಗರನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರನ್ನು ಯಾರೂ ಕೆಳಗಿಳಿಸಲ್ಲ ಎಂದು ಹೇಳಿದರು.
ಇದೇ ವೇಳೆ ಜಾತಿಗಣತಿ ಜಾರಿ ವಿಚಾರವಾಗಿ, ರಾಜ್ಯದಲ್ಲಿ ಜಾತಿಗಣತಿ ಜಾರಿಯಾಗಿಲಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಒಪ್ಪಿದರೆ ಜಾರಿಯಾಗುತ್ತದೆ ಎಂದು ಹೇಳಿದರು.