ಬೆಂಗಳೂರು: ಕರ್ನಾಟಕ ವಕ್ಫ್ ಮಂಡಳಿಯಲ್ಲಿ ಅನೇಕ ವರ್ಷಗಳಿಂದ ಒಂದೇ ಕಡೆ ಬೇರುಬಿಟ್ಟ ಅಧಿಕಾರಿಗಳು ಮತ್ತು ನೌಕರರನ್ನು ವರ್ಗಾವಣೆ ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಆಸ್ತಿಗಳ ಸಂರಕ್ಷಣೆ ಹಾಗೂ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ವಕ್ಪ್ ಆಸ್ತಿ ಸಂರಕ್ಷಣೆ ವಿಚಾರದಲ್ಲಿ ನಿರ್ಲಕ್ಷ್ಯ ತೋರುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ವಕ್ಫ್ ಆಸ್ತಿಗಳ ಮಾಹಿತಿ, ಕೋರ್ಟ್ ನಲ್ಲಿರುವ ಪ್ರಕರಣ, ಲೀಸ್ ಆಧಾರದಲ್ಲಿ ನೀಡಿರುವ ಆಸ್ತಿಗಳ ಕುರಿತಾಗಿ ಸಮರ್ಪಕ ಮಾಹಿತಿ ನೀಡಿದ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು 15 ದಿನಗಳಲ್ಲಿ ಸಮಗ್ರ ಮಾಹಿತಿ ನೀಡಬೇಕು. ಸೂಕ್ತ ಮಾಹಿತಿ ನೀಡದಿದ್ದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ವರ್ಷಗಳಿಂದ ಒಂದೇ ಕಡೆ ಬೇರೆ ಬಿಟ್ಟಿರುವ ಅಧಿಕಾರಿಗಳು ಮತ್ತು ನೌಕರರನ್ನು ವರ್ಗಾವಣೆ ಮಾಡುವಂತೆ ಸಚಿವರು ಸೂಚನೆ ನೀಡಿದ್ದು, ಮಂಡಳಿಯ ನೌಕರರಲ್ಲಿ ಆತಂಕ ತಂದಿದೆ.