alex Certify BIG BREAKING: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಗೆ ಎಸಿಬಿ ಶಾಕ್, ಮನೆ ಸೇರಿ 5 ಕಡೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಗೆ ಎಸಿಬಿ ಶಾಕ್, ಮನೆ ಸೇರಿ 5 ಕಡೆ ದಾಳಿ

ಬೆಂಗಳೂರು: ಶಾಸಕ ಜಮೀರ್ ಅಹಮದ್ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಹಾಗೂ ಕಚೇರಿ ಸೇರಿ ಐದು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಈ ಮೂಲಕ ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಎಸಿಬಿ ಶಾಕ್ ನೀಡಿದೆ.

ಬೆಂಗಳೂರಿನ ಫ್ರೆಜರ್ ಟೌನ್ ನಲ್ಲಿರುವ ನಿವಾಸದ ಮೇಲೆ 40 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಕಳೆದ ವರ್ಷ ಜಮೀರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಆದಾಯ ಮೀರಿ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲ್ವೇ ಸ್ಟೇಷನ್ ಸಮೀಪ ಇರುವ ಜಮೀರ್ ಅಹಮದ್ ನಿವಾಸ, ಸದಾಶಿವನಗರದ ಅತಿಥಿಗೃಹ ಹಾಗೂ ಕಲಾಸಿಪಾಳ್ಯದ ಟ್ರಾವೆಲ್ಸ್ ಕಚೇರಿ, ಬನಶಂಕರಿಯಲ್ಲಿರುವ ಕಚೇರಿ ಮತ್ತು ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...