ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಕಷ್ಟಪಟ್ಟು ರಿಸ್ಕ್ ಪಡೆದುಕೊಂಡು ಬೆಡ್ ಬ್ಲಾಕಿಂಗ್ ದಂಧೆ ಅಕ್ರಮ ಬಯಲಿಗೆಳೆದಿದ್ದಾರೆ ಅವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಅಕ್ರಮದ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಅವರೊಂದಿಗೆ ಚರ್ಚಿಸಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದು, ಅವರ ಬಗ್ಗೆ ಜಮೀರ್ ಅಹ್ಮದ್ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ವಾಸ್ತವ ಸಂಗತಿಯನ್ನು ಅರಿಯಬೇಕು ಎಂದಿದ್ದಾರೆ.
ತೇಜಸ್ವಿ ಸೂರ್ಯ ಒಳ್ಳೆಯ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಅದೇ ಅಪರಾಧ ಎನ್ನುವಂತೆ ಅವರ ಬಗ್ಗೆ ಜಮೀರ್ ಅವರು ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.