alex Certify ಚಿಕ್ಕಬಳ್ಳಾಪುರದಲ್ಲಿ ಮಾರಕ `ಝೀಕಾ ವೈರಸ್‌’ ಪತ್ತೆ : ಜನರಲ್ಲಿ ಹೆಚ್ಚಿದ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಬಳ್ಳಾಪುರದಲ್ಲಿ ಮಾರಕ `ಝೀಕಾ ವೈರಸ್‌’ ಪತ್ತೆ : ಜನರಲ್ಲಿ ಹೆಚ್ಚಿದ ಆತಂಕ

ಚಿಕ್ಕಬಳ್ಳಾಪುರ : ಕೇರಳದಂತೆ ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಸೋಂಕಿನ ಆತಂಕ ಶುರುವಾಗಿದ್ದು, ಸೊಳ್ಳೆಗಳಲ್ಲಿ ಝೀಕಾ ವೈರಸ್ ಪತ್ತೆಯಾಗಿದೆ. ಆದರೆ ಈವರೆಗೆ ಜಿಲ್ಲೆಯಲ್ಲಿ ಮನುಷ್ಯರಿಗೆ ಈ ಸೋಂಕು ಹರಡಿರುವುದು ದೃಢಪಟ್ಟಿಲ್ಲ.

ಚಿಕ್ಕಬಳ್ಳಾಪುರ ಜಿಲ್ಲೆಯ ಆರು ಕಡೆ ಸೊಳ್ಳೆಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅದರಲ್ಲಿ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಿನ ಬಳಿ ಸಂಗ್ರಹಿಸಿದ್ದ ಸೊಳ್ಳೆಗಳಲ್ಲಿ ಝೀಕಾ ವೈರಸ್ ಪತ್ತೆಯಾಗಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಝೀಕಾ ವೈರಸ್‌ ಸೋಂಕಿಗೆ ಒಳಗಾದವರು ಸಾಮಾನ್ಯವಾಗಿ ಯಾವುದೇ ರೋಗಲಕ್ಷಣಗಳನ್ನು ಅನುಭವಿಸುವುದಿಲ್ಲಅಥವಾ ತುಂಬಾ ಸೌಮ್ಯವಾಗಿರುತ್ತದೆ. ಡೆಂಗೆ ಮತ್ತು ಚಿಕೂನ್‌ ಗುನ್ಯಾದಂತೆ ಇರುತ್ತದೆ. ಜ್ವರ, ದದ್ದು, ತಲೆನೋವು, ಕೀಲುನೊವು, ಆಯಾಸ, ಕೆನ್ನೆಗಳ ಊತ, ಬೆವರುವುದು, ತಣ್ಣಗಾಗುವುದು, ವಾಂತಿ, ಕೆಂಪಾದ ಕಣ್ಣುಗಳು ಇತ್ಯಾದಿ ಲಕ್ಷಣಗಳು ಗೋಚರಿಸುತ್ತವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...