
ಶಿವಮೊಗ್ಗ: ರಾಜ್ಯದಲ್ಲಿ ಡೆಂಘೀ ಅಟ್ಟಹಾಸದ ನಡುವೆ ಇದೀಗ ಮಹಾಮಾರಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಝೀಕಾ ವೈರಸ್ ಮೊದಲ ಬಲಿ ಪಡೆದಿದೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಂದು ಝೀಕಾ ಪ್ರಕರಣ ಪತ್ತೆಯಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಯುವಕರೊಬ್ಬರಲ್ಲಿ ಝೀಕಾ ಸೋಂಕು ದೃಢಪಟ್ಟಿದೆ. ಟ್ರಾವೆಲ್ ಹಿಸ್ಟ್ರಿ ಇಲ್ಲದ ಯುವಕನಿಗೆ ಝೀಕಾ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯ ಸಾಗರ ತಾಲೂಕಿನ ಗಾಂಧಿನಗರದ ಯುವಕನಲ್ಲಿ ಝೀಕಾ ವೈರಸ್ ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗದ ಗಾಂಧಿನಗರದಲ್ಲಿ ಝೀಕಾ ವೈರಸ್ ಗೆ 74 ವರ್ಷದ ವೃದ್ಧ ಬಲಿಯಾಗಿದ್ದರು. ಇದರ ಬೆನ್ನಲ್ಲೇ ಇದೀಗ ಸಾಗರದ ಯುವಕನಲ್ಲಿ ಝೀಕಾ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.