alex Certify ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸುಪ್ರೀಂ ಕೋರ್ಟ್ ನಲ್ಲಿ ಆಯೋಗದ ಅರ್ಜಿ ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸುಪ್ರೀಂ ಕೋರ್ಟ್ ನಲ್ಲಿ ಆಯೋಗದ ಅರ್ಜಿ ವಜಾ

ನವದೆಹಲಿ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ಮರು ವಿಂಗಡಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ಇತರೆ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಮತ್ತೆ 12 ವಾರಗಳ ಕಾಲ ಹೈಕೋರ್ಟ್ ಕಾಲಾವಕಾಶ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಶುಕ್ರವಾರ ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ಅನಿರುದ್ಧ್ ಬೋಸ್ ಅವರ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ರಾಜ್ಯ ಚುನಾವಣಾ ಆಯೋಗದ ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್ ನೀಡಿದ ಆದೇಶಕ್ಕೆ ತಡೆ ನೀಡಿ ಈ ಹಿಂದೆ ಆಯೋಗ ಹೊರಡಿಸಿದ ಆದೇಶದ ಪ್ರಕಾರ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಬೇಕೆಂದು ರಾಜ್ಯ ಚುನಾವಣಾ ಆಯೋಗದಿಂದ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದರು. ನಂತರ ಸುಪ್ರೀಂ ಕೋರ್ಟ್ ಪೀಠ ಚುನಾವಣಾ ಆಯೋಗದ ಅರ್ಜಿಯನ್ನು ವಜಾಗೊಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...