BIG NEWS: ಮುಂದಿನ ವಾರ ಮೈಸೂರು, ಶಿವಮೊಗ್ಗ, ತುಮಕೂರು ಪಾಲಿಕೆ ಚುನಾವಣೆ ಘೋಷಣೆ: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಯೂ ಶೀಘ್ರ ಸಾಧ್ಯತೆ

ಬೆಂಗಳೂರು: ಜಿಲ್ಲಾ ಮತ್ತು ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅವಧಿ ಮುಗಿದರೂ ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ನಡೆದಿಲ್ಲ. ಹೀಗಾಗಿ ಸರ್ಕಾರದ ವಿರುದ್ಧ ನ್ಯಾಯಾಂಗ ಉಲ್ಲಂಘನೆ ಕೇಸ್ ದಾಖಲಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ.

ಜಿಪಂ, ತಾಪಂ ಮತ್ತು ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದ್ದು, ಪ್ರಕರಣ ಇತ್ಯರ್ಥವಾದ ಕೂಡಲೇ ಚುನಾವಣೆ ನಡೆಸಲಾಗುವುದು. ಅವಧಿ ಮುಗಿದ ಆರು ತಿಂಗಳ ಒಳಗೆ ಚುನಾವಣೆಗೆ ಸರ್ಕಾರ ಮುಂದಾಗದಿದ್ದರೆ ನಾವು ಕೋರ್ಟ್ ಗೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮುಂದಿನ ವಾರ ಮೈಸೂರು, ಶಿವಮೊಗ್ಗ, ತುಮಕೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಮಾಡಲಾಗುವುದು. ಮೀಸಲಾತಿ ಇನ್ನು ಪ್ರಕಟವಾಗಿಲ್ಲ. ಈ ಹಿಂದಿನ ಮೀಸಲಾತಿ ಆಧಾರದ ಮೇಲೆ ಚುನಾವಣೆ ನಡೆಸಲಾಗುವುದು. ಸುಪ್ರೀಂಕೋರ್ಟ್ ನಿರ್ದೇಶನ ಇದ್ದು, ನವೆಂಬರ್ ಒಳಗೆ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರ ಮೀಸಲಾತಿ ಪಟ್ಟಿ ನೀಡುತ್ತಿಲ್ಲ. ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಚುನಾವಣೆ ನಡೆಸಲಾಗುವುದು. ಫೆಬ್ರವರಿ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯದಿದ್ದರೆ 15ನೇ ಹಣಕಾಸಿನ ಆಯೋಗದ ಸುಮಾರು 2000 ಕೋಟಿ ರೂ. ಹಣ ವಾಪಸ್ ಹೋಗಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read