
ದಾವಣಗೆರೆ: ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ನಿಗದಿಪಡಿಸಲು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಲಾಗಿದ್ದು, ಪ್ರಕ್ರಿಯೆ ಪ್ರಗತಿಯಲ್ಲಿದೆ. ಮೊದಲನೇ ಹಂತದಲ್ಲಿ ಬಿಬಿಎಂಪಿ ಚುನಾವಣೆಯ ಬಗ್ಗೆ ಮೀಸಲಾತಿ ನಿಗದಿಮಾಡಲಿದ್ದು, ನಂತರ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿಗಳ ಚುನಾವಣೆಗೆ ಹಿಂದುಳಿದ ವರ್ಗಗಳ ಆಯೋಗ ನೀಡುವ ಮೀಸಲಾತಿಯನ್ವಯ ಚುನಾವಣೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ