ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಆದಷ್ಟು ಬೇಗನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ,
ಲೋಕಸಭೆ ಚುನಾವಣೆಯ ನಂತರ ಜಿಪಂ, ತಾಪಂ, ಬಿಬಿಎಂಪಿ ಸೇರಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಕ್ಷೇತ್ರ ಪುನರ್ ವಿಂಗಡಣೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಅದೇ ರೀತಿ ಮಾಡುತ್ತೇವೆ. ಪುನರ್ ವಿಂಗಡಣೆಯಾದ ನಂತರ ಮೀಸಲಾತಿ ನಿಗದಿಪಡಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಅವಧಿ ಮುಗಿದು ಮೂರು ವರ್ಷ ಕಳೆದರೂ ಚುನಾವಣೆ ನಡೆದಿಲ್ಲ. ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ವಿಚಾರ ಹೈಕೋರ್ಟ್ ನಲ್ಲಿದೆ.