ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಕ್ಷೇತ್ರ ವಿಂಗಡಣೆ ಆಯೋಗ ರಚನೆಗೆ ಆದೇಶ ಜಾರಿಯಾಗಿದೆ.
ಜಿಪಂ, ತಾಪಂ ಕ್ಷೇತ್ರಗಳ ಪುನರ್ ವಿಂಗಡಣೆಗೆ ಪ್ರತ್ಯೇಕ ಆಯೋಗ ರಚಿಸುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇದರೊಂದಿಗೆ ಜಿಪಂ ಮತ್ತು ತಾಪಂ ಚುನಾವಣೆ ಮುಂದೂಡುವ ಸರ್ಕಾರದ ನಿರ್ಧಾರಕ್ಕೆ ಬಲ ಬಂದಿದೆ.
ಜಿಪಂ, ತಾಪಂ ಕ್ಷೇತ್ರಗಳ ವಿಂಗಡಣೆ, ಮೀಸಲಾತಿ ಅಧಿಸೂಚನೆಗಳು ರದ್ದಾಗಲಿವೆ. ತಿದ್ದುಪಡಿ ವಿಧೇಯಕದ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಮಂಡನೆಯಾಗಿ ಪಾಸ್ ಆಗಿದ್ದ ತಿದ್ದುಪಡಿ ಮಸೂದೆಗೆ ರಾಜ್ಯಪಾಲರ ಅಂಕಿತ ಬಿದ್ದಿದೆ.