alex Certify ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಶೀಘ್ರವೇ ಎಲೆಕ್ಷನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಶೀಘ್ರವೇ ಎಲೆಕ್ಷನ್

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಹೈಕೋರ್ಟ್ ಗಡುವು ವಿಧಿಸಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಕ್ಷೇತ್ರ ಪುನರ್ವಿಂಗಡಣೆ, ಒಬಿಸಿ ಮೀಸಲಾತಿ ನಿಗದಿಯನ್ನು 12 ವಾರಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿಂದ ಗಡುವು ವಿಧಿಸಲಾಗಿದೆ.

ನಂತರದ ಒಂದು ವಾರದಲ್ಲಿ ರಾಜ್ಯ ಚುನಾವಣಾ ಆಯೋಗ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಆರಂಭಿಸಬೇಕೆಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ನೀಡಲಾಗಿದೆ. ಸುಮಾರು ಒಂದೂವರೆ ವರ್ಷದಿಂದ ಖಾಲಿ ಇರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಶೀಘ್ರವೇ ನಡೆಯುವ ಸಾಧ್ಯತೆ ಇದೆ.

ಕ್ಷೇತ್ರ ಮರು ವಿಂಗಡಣೆ ಮೀಸಲಾತಿ ಮರು ನಿಗದಿಗಾಗಿ ಕಾಯ್ದೆಗೆ ಸರ್ಕಾರ ತಿದ್ದುಪಡಿ ತಂದಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಚುನಾವಣೆ ವಿಳಂಬವಾಗಿತ್ತು. ಈಗ 12 ವಾರದಲ್ಲಿ ಪ್ರಕ್ರಿಯೆ ಮುಗಿಸಲು ಆದೇಶ ನೀಡಲಾಗಿದೆ. ಸರ್ಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿರುವುದರಿಂದ ಶೀಘ್ರವೇ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...