ಕಲಬುರ್ಗಿ: ಒಬಿಸಿ ಮೀಸಲಾತಿ ಇಲ್ಲದೆ ಪಂಚಾಯತಿ ಚುನಾವಣೆ ನಡೆಸಲಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ..
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಪಂ, ತಾಪಂ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡಬೇಕೆಂಬ ವಿಚಾರದ ಕುರಿತಾಗಿ ಚರ್ಚೆ ನಡೆದಿದ್ದು, ಅಂತಿಮ ತೀರ್ಮಾನದ ನಂತರ ಪಂಚಾಯತ್ ಚುನಾವಣೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಒಬಿಸಿ ಮೀಸಲಾತಿ ಇಲ್ಲದೆ ಜಿಪಂ, ತಾಪಂ ಚುನಾವಣೆ ನಡೆಸಬಾರದು ಎನ್ನುವುದು ನಮ್ಮ ನಿರ್ಧಾರವಾಗಿದ್ದು, ಸಿಎಂ ಜೊತೆಗೆ, ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ. ಒಬಿಸಿ ಮೀಸಲಾತಿ ನೀಡುವ ಬಗ್ಗೆ ತೀರ್ಮಾನವಾಗಬೇಕಿದೆ. ಬಳಿಕ ಚುನಾವಣೆ ನಡೆಸಬಹುದು ಎಂದು ಹೇಳಿದ್ದಾರೆ.