
ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡುವ ಕುರಿತು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಆದೇಶ ತೊಡಕಾಗಿದೆ ಎನ್ನಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯ ನಡೆಯುವುದು ಅನುಮಾನ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ
ಹಿಂದುಳಿದ ವರ್ಗದವರು ಸಾಮಾನ್ಯ ವರ್ಗಕ್ಕೆ ಸೇರುತ್ತಾರೆ ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಹೇಳಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಸದ್ಯಕ್ಕೆ ಚುನಾವಣೆ ನಡೆಯುವುದು ಎಂದು ಈಶ್ವರಪ್ಪ ಹೇಳಿದ್ದಾರೆ.