ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸದ್ಯಕ್ಕೆ ನಡೆಸದಿರಲು ಸರ್ಕಾರ ಮುಂದಾಗಿದೆ. ವರ್ಷಾಂತ್ಯದವರೆಗೆ ಜಿಪಂ, ತಾಪಂ ಚುನಾವಣೆಯನ್ನು ಮುಂದೂಡಲು ಸರ್ಕಾರ ತೀರ್ಮಾನಿಸಿದೆ. ಕೊರೋನಾ ಸೋಂಕಿನ ಕಾರಣದಿಂದ ಡಿಸೆಂಬರ್ ವರೆಗೆ ಚುನಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.
ಚುನಾವಣಾ ಆಯೋಗದಿಂದ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ಪೂರ್ವಭಾವಿ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಆಹ್ವಾನಿಸಲಾಗಿದೆ. ಚುನಾವಣಾ ಆಕಾಂಕ್ಷಿಗಳು ಮತ್ತು ರಾಜಕೀಯ ಪಕ್ಷಗಳು ಕೂಡ ತಯಾರಿ ಆರಂಭಿಸಿದೆ. ಆದರೆ, ಸರ್ಕಾರ ಆಕಾಂಕ್ಷಿಗಳಿಗೆ ನಿರಾಸೆ ತಂದಿದೆ.
ಈಗಾಗಲೇ ಚುನಾವಣೆಗೆ ಸಿದ್ಧತೆ ನಡೆಸಿದ್ದವರಿಗೆ ಸರ್ಕಾರದ ನಿರ್ಧಾರ ನಿರಾಸೆ ತಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್ ಅಂತ್ಯದವರೆಗೆ ಜಿಪಂ ತಾಪಂಗಳಿಗೆ ನಡೆಯಬೇಕಿದ್ದ ಸಾರ್ವತ್ರಿಕ ಚುನಾವಣೆಯನ್ನು ಕೊರೋನಾ ಕಾರಣದಿಂಧ ಮುಂದೂಡಲಾಗಿದೆ.