ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ.
ರಾಜ್ಯ ಚುನಾವಣಾ ಆಯೋಗದಿಂದ ರಾಜ್ಯದ 1191 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ಇದರೊಂದಿಗೆ 3285 ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಕರಡು ಅಧಿಸೂಚನೆ ಹೊರಡಿಸಿದೆ.
ಹಿಂದೆ ಹೊರಡಿಸಲಾದ ಎಲ್ಲ ಅಧಿಸೂಚನೆ ರದ್ದುಪಡಿಸಿ ಹೊಸ ಕರಡು ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಪತ್ರದಲ್ಲಿ ಗ್ರಾಮಸ್ವರಾಜ್ ಪಂಚಾಯತ್ ರಾಜ್ ನಿಯಮ ಅನ್ವಯ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸ್ಥಾನಗಳಿಗೆ ಮೀಸಲಾತಿ ಕರಡು ಪ್ರಕಟಿಸಲಾಗಿದೆ. ಅಧಿಸೂಚನೆ ಪ್ರಕಟಗೊಂಡ 7 ದಿನಗಳ ಕಾಲಾವಕಾಶದೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸುವುದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಜುಲೈ 8 ರೊಳಗೆ ಕಾರ್ಯದರ್ಶಿಗಳು, ರಾಜ್ಯ ಚುನಾವಣಾ ಆಯೋಗ ಒಂದನೇ ಮಹಡಿ, ಕೆ.ಎಸ್.ಸಿ.ಎಂ.ಎಫ್. ಕಟ್ಟಡ, ನಂಬರ್ 8, ಕನ್ನಿಂಗ್ ಹ್ಯಾಮ್ ರಸ್ತೆ ಬೆಂಗಳೂರು ಇವರಿಗೆ ತಲುಪುವಂತೆ ಸಲ್ಲಿಸತಕ್ಕದ್ದು. www.erajyapatra.com ದಲ್ಲಿ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರಗಳ ಅಧಿಸೂಚನೆ ಗಮನಿಸಬಹದು ಎಂದು ಹೇಳಲಾಗಿದೆ.