BREAKING: ತಡರಾತ್ರಿ ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ: ಭಾರತದ ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಪುರಸ್ಕೃತ ಎಲ್‌.ಕೆ. ಅಡ್ವಾಣಿ ಅವರನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಎಐಐಎಂಎಸ್) ಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಹೇಳಿಕೆಯಲ್ಲಿ ದೃಢಪಡಿಸಿದೆ.

ವಯೋ ಸಹಜ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್‌.ಕೆ. ಅಡ್ವಾಣಿ ಅವರು ನವದೆಹಲಿಯ ಏಮ್ಸ್‌ ಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ನಿಗಾ ವಹಿಸಿದ್ದಾರೆ.

ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆಸ್ಪತ್ರೆಯು ಹೆಚ್ಚಿನ ವಿವರಗಳನ್ನು ನೀಡದಿದ್ದರೂ, ಮಾಹಿತಿ ಪ್ರಕಾರ, 96 ವರ್ಷದ ಅಡ್ವಾಣಿ ಅವರನ್ನು ಬುಧವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ವೃದ್ಧಾಪ್ಯ ವಿಭಾಗದ ತಜ್ಞರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯ ನಾಯಕ ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

https://twitter.com/ANI/status/1806094519856701610

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read