HomeKarnatakaಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ಶೀಘ್ರದಲ್ಲೇ ಲೋಡ್ ಶೆಡ್ಡಿಂಗ್ ಸಮಸ್ಯೆ ಬಗೆಹರಿಸುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವರು, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗುತ್ತಿರುವುದು ಸತ್ಯ. ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರದಲ್ಲೇ ವಿದ್ಯುತ್ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಭಾರಿ ಪ್ರಮಾಣದಲ್ಲಿದೆ. ಲೋಡ್ ಶೆಡ್ಡಿಂಗ್ ಆಗುತ್ತಿರುವುದು ನಿಜ. ಮುಖ್ಯಮಂತ್ರಿಗಳು ವಿದ್ಯುತ್ ಕೊರತೆ, ಲೋಡ್ ಶೆಡ್ಡಿಂಗ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆದಷ್ಟು ಶೀಘ್ರವೇ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲಾಗುವುದು. ಈ ಕುರಿತಾಗಿ ಯಾವುದೇ ಆತಂಕ ಬೇಡ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular