HomeKarnatakaವಾರದೊಳಗೆ ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಪರಿಹಾರ; ಕೃಷಿ ಸಚಿವ ಚಲುವರಾಯಸ್ವಾಮಿ ಭರವಸೆ

ವಾರದೊಳಗೆ ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಪರಿಹಾರ; ಕೃಷಿ ಸಚಿವ ಚಲುವರಾಯಸ್ವಾಮಿ ಭರವಸೆ

ಉಡುಪಿ: ವಿದ್ಯುತ್ ಉತ್ಪಾದನೆ ಕಡಿಮೆಯಾಗಿರುವುದರಿಂದ ರಾಜ್ಯದಲ್ಲಿ ತೊಂದರೆ ಎದುರಾಗಿದೆ. ಲೋಡ್ ಶೆಡ್ದಿಂಗ್ ಸಮಸ್ಯೆಯನ್ನು ಶೀಘ್ರದಲ್ಲಿಯೇ ಪರಿಹರಿಸುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಒಂದು ವಾರದೊಳಗೆ ಲೋಡ್ ಶೆಡ್ಡಿಂಗ್ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಬಯಲು ಸೀಮೆ ಕಡೆ ಕೂಡ ತುಂಬಾ ಸಮಸ್ಯೆಯಾಗಿದೆ. ಅದನ್ನೂ ಸರಿಪಡಿಸಬೇಕಿದೆ. ಶೀಘ್ರದಲ್ಲಿಯೇ ವಿದ್ಯುತ್ ಸಮಸ್ಯೆ ಪರಿಹರಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯುತ್ ಖರೀದಿ ಬಗ್ಗೆ ಚಿಂತನೆಗಳು ನಡೆದಿವೆ. ದುಬಾರಿಯಾದರೂ ವಿದ್ಯುತ್ ಖರೀದಿ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ತ್ವರಿತವಾಗಿ ಕ್ರಮಕೈಗೊಳ್ಳಲಾಗುತ್ತದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular