HomeKarnatakaರಾಜ್ಯ ಸರ್ಕಾರದಿಂದ ಜನತೆಗೆ ಭರ್ಜರಿ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ ಜನತೆಗೆ ಭರ್ಜರಿ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಜನರ ಆರ್ಥಿಕ ಸಬಲೀಕರಣ ಹಾಗೂ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಅರ್ಹ ಫಲಾನುಭವಿಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಸರ್ಕಾರದ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿ. ವತಿಯಿಂದ 2026-27 ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ(Fresh Students), ಅರಿವು ಶೈಕ್ಷಣಿಕ ಸಾಲ ಯೋಜನೆ (Renewals), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು (Fresh Students), ಸ್ವಯಂ ಉದ್ಯೋಗ ಸಾಲ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಪ್ರವರ್ಗ-1 ರಲ್ಲಿ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಸೆ.30 ರೊಳಗೆ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: https://ambigaradevelopment.karnataka.gov.in ಅಥವಾ ದೂರವಾಣಿ ಸಂಖ್ಯೆ 080-22864099 ಅಥವಾ ಬೆಂಗಳೂರು ಉತ್ತರ ಜಿಲ್ಲೆಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವಕರ್ಮ ಸಮುದಾಯಗಳ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು : ವಿಶ್ವ ಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ (ನಿ) ವತಿಯಿಂದ 2026-27 ನೇ ಸಾಲಿನಲ್ಲಿ ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು –ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ) . ಗಂಗಾಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಅಟಲ್ –ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸೆ.30 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: https://kvcdcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ : 080-23156006 ಅಥವಾ ಜಿಲ್ಲಾ ವ್ಯವಸ್ಥಾಪಕರು,ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ದಕ್ಷಿಣ ಜಿಲ್ಲೆಯ ಕರ್ನಾಟಕ ವಿಶ್ವ ಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸವಿತಾ ಸಮಾಜ ; ಅರ್ಜಿ ಆಹ್ವಾನ

ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮ (ನಿ) ವತಿಯಿಂದ 2026-27 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು https://sevasindhu.karnataka.gov.in ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ , ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಆಕ್ಟೋಬರ್ 01 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kssd.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ : 080-22374832 , 8050770004, ಅಥವಾ 8050770005 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪ್ಪಾರ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2026-27 ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ, ಶೈಕ್ಷಣಿಕ ಸಾಲ ಯೋಜನೆ (ನೂತನ), ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ಸ್ವಾವಲಂಬಿ ಸಾರಥಿ ಯೋಜನೆ , ಶ್ರೀ ಭಗೀರಥ ಗಂಗಾ ಕಲ್ಯಾಣ ನೀರವಾರಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಬೆಂಗಳೂರು ಒನ್ / ಕರ್ನಾಟಕ –ಒನ್ / ಅಟಲ್ –ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. 2024-25 ಮತ್ತು 25-26 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೆ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಹಾಗೂ ಅಂತಹ ಅರ್ಜಿದಾರರನ್ನು ಪ್ರಸ್ತುತ ಸಾಲಿಗೂ ಪರಿಗಣಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23156006 ಅಥವಾ ಬೆಂಗಳೂರು ದಕ್ಷಿಣ ಜಿಲ್ಲಾ ಕಛೇರಿ ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ , ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮ (ನಿ), ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular