HomeKarnatakaಸ್ತ್ರೀಶಕ್ತಿ ಸಂಘಗಳ ಮಹಿಳೆಯರ ಸಾಲ ಮನ್ನಾ: ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ, ಉಚಿತ ವಿದ್ಯುತ್,...

ಸ್ತ್ರೀಶಕ್ತಿ ಸಂಘಗಳ ಮಹಿಳೆಯರ ಸಾಲ ಮನ್ನಾ: ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ, ಉಚಿತ ವಿದ್ಯುತ್, ಮಹಿಳೆಯರಿಗೆ 2000 ರೂ. ಬಳಿಕ ಕಾಂಗ್ರೆಸ್ 4ನೇ ಭರವಸೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಮತದಾರರ ಓಲೈಕೆಗೆ ಭರವಸೆಗಳ ಮೇಲೆ ಭರವಸೆ ನೀಡತೊಡಗಿದೆ.

ಈಗಾಗಲೇ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ಮಾಸಿಕ 2,000 ರೂ., ಬಿಪಿಎಲ್ ಕುಟುಂಬಕ್ಕೆ ತಿಂಗಳಿಗೆ 10 ಕೆಜಿ ಅಕ್ಕಿ ವಿತರಿಸುತಾಗಿ ಘೋಷಣೆ ಮಾಡಿರುವ ಕಾಂಗ್ರೆಸ್, ಈಗ ಸ್ತ್ರೀಶಕ್ತಿ ಸಂಘಗಳ ಮಹಿಳೆಯರ ಸಾಲ ಮನ್ನಾ ಮಾಡುವುದಾಗಿ ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವ ಜೊತೆಗೆ ರೈತರು ಮತ್ತು ಸ್ತ್ರೀಶಕ್ತಿ ಸಾಲದ ಮೊತ್ತವನ್ನು ಹೆಚ್ಚಳ ಮಾಡಲಾಗುವುದು. ಸ್ತ್ರೀಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲವನ್ನು ಮೂರರಿಂದ ಐದು ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು. ರೈತರಿಗೆ ಶೇಕಡ ಮೂರರ ಬಡ್ಡಿ ದರದ ಸಾಲವನ್ನು 5 ಲಕ್ಷದಿಂದ 20 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿದೆ.

‘ಪ್ರಜಾ ಧ್ವನಿ’ ಬಸ್ ಯಾತ್ರೆ ಮೂಲಕ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ನಡೆಸಿದ ಕಾಂಗ್ರೆಸ್ ನಾಯಕರು, ಸ್ತ್ರೀಶಕ್ತಿ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದು, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಬಜೆಟ್ ನಲ್ಲಿ 10,000 ಕೋಟಿ ರೂ. ಮೀಸಲಿಡುವುದಾಗಿ ವಾಗ್ದಾನ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular