HomeKarnatakaಮರಾಠ ಸಮುದಾಯದವರಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯ

ಮರಾಠ ಸಮುದಾಯದವರಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯ

ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಸಾಲ ಸೌಲಭ್ಯಗಳ ವಿವರ;

ಶ್ರೀ. ಶಹಜೀರಾಜೇ ಸಮೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

    ಅರ್ಹತೆ;

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು.(ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲಭ್ಯವನ್ನು(ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಅಸಕ್ತರು ಅರ್ಜಿ ಸಲ್ಲಿಸಲು ಆ.31 ರೊಳಗೆ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in     ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್  https://kmcdc.karnataka.gov.in ಇಲ್ಲಿ ಸಂಪರ್ಕಿಸಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಗೆ ಸಂಪರ್ಕಿಸಬಹುದು ಎಂದು ಅಭಿವೃದ್ಧಿ ಕರ್ನಾಟಕ ಮರಾಠ ಸಮುದಾಯಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular