HomeBusinessಸಾಲಗಾರರಿಗೆ ಗುಡ್ ನ್ಯೂಸ್: ದಂಡ ಬಡ್ಡಿ ನಿಷೇಧಿಸಿದ RBI

ಸಾಲಗಾರರಿಗೆ ಗುಡ್ ನ್ಯೂಸ್: ದಂಡ ಬಡ್ಡಿ ನಿಷೇಧಿಸಿದ RBI

ಮುಂಬೈ: ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಆದಾಯ ವೃದ್ಧಿಗೆ ದಂಡ ಬಡ್ಡಿ ಹೇರಿಕೆಯನ್ನು ಸಾಧನವಾಗಿ ಮಾಡಿಕೊಂಡಿರುವುದಕ್ಕೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಕಳವಳ ವ್ಯಕ್ತಪಡಿಸಿದ್ದು, ದಂಡ ಬಡ್ಡಿಯನ್ನು ನಿಷೇಧಿಸಿದೆ.

ಸಾಲ ಮರುಪಾವತಿಗೆ ವಿಫಲವಾದರೆ ದಂಡ ಬಡ್ಡಿಗೆ ಬದಲಾಗಿ ತರ್ಕಬದ್ಧವಾದ ದಂಡ ಶುಲ್ಕ ಮಾತ್ರ ಹೇರಬಹುದು ಎಂದು ಹೇಳಿದೆ. ದಂಡ ಬಡ್ಡಿ ಹೇರಿಕೆ ಮೇಲಿನ ನಿಷೇಧ 2024ರ ಜನವರಿ 1ರಿಂದ ಜಾರಿಗೆ ಬರಲಿದೆ ಎಂದು ಆರ್‌ಬಿಐ ತಿಳಿಸಿದೆ. ಸಾಲ ಮಂಜೂರಾತಿ ವೇಳೆ ಮರುಪಾವತಿ ಸಾಮರ್ಥ್ಯ ಪರಿಗಣಿಸಬೇಕು. ಸಾಲದ ಒಪ್ಪಂದ ಉಲ್ಲಂಘನೆಗೆ ದಂಡ ಶುಲ್ಕ ಮಾತ್ರ ವಿಧಿಸಬೇಕು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular