HomeKarnatakaಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಬಾಂಗ್ಲಾ ವಲಸಿಗರನ್ನು ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೆಆರ್ ಪುರಂ ಪೋಲಿಸ್ ಠಾಣೆಗೆ ಸಾರ್ವಜನಿಕರು ಅಕ್ರಮ ಬಾಂಗ್ಲಾ ವಲಸಿಗರನ್ನು ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳು ಕಳ್ಳತನ ಸೇರಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕೆಆರ್ ಪುರಂ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.

ಬೆಂಗಳೂರಿನ ವಿವಿಧೆಡೆ ಮನೆ ಕಳ್ಳತನ, ದರೋಡೆ ಮಾಡಿದ ಆರೋಪದ ಮೇಲೆ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಸ್ಥಳೀಯರು ಹಿಡಿದು ಕೆಆರ್ ಪುರಂ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದೂ ಜಾಗರಣ ವೇದಿಕೆ ಸಹ ಸಂಯೋಜಕ ಪ್ರಶಾಂತ್ ಕುಮಾರ್, ಸ್ನೇಹಿತ ನಾಗರಾಜು ಎಂಬುವರ ಸಹಾಯದಿಂದ ಇಬ್ಬರು ಯುವಕರನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ನಗರಕ್ಕೆ ಅಕ್ರಮವಾಗಿ ಬಾಂಗ್ಲಾದೇಶದಿಂದ ಬಂದಿದ್ದ ಯುವಕರು ದೇವಾಲಯ, ಮಕ್ಕಳ ಕಳ್ಳತನ ನಡೆಸುತ್ತಿದ್ದು ಅಂತಹ ಅಕ್ರಮ ಬಾಂಗ್ಲಾ ನಸುಳುಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular