HomeKarnatakaಹಾಡಹಗಲೇ ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಹಾಡಹಗಲೇ ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾರುತಿಪುರದಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿದೆ.

ಮಾರುತಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸುಧೀಂದ್ರ ಹೊಳ್ಳ ಅವರ ಮನೆಯಲ್ಲಿ ಮಧ್ಯಾಹ್ನದ ವೇಳೆ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮುಂಭಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular