HomeKarnatakaಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕು: ಸಿಐಡಿಯಿಂದ ಆರೋಪಿ ಪೊಲೀಸರ ವಿಚಾರಣೆ

ಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕು: ಸಿಐಡಿಯಿಂದ ಆರೋಪಿ ಪೊಲೀಸರ ವಿಚಾರಣೆ

ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಐಡಿ ತಂಡ ಚುರುಕುಗೊಳಿಸಿದೆ.

ಕಾರಾಗೃಹದಲ್ಲಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ತಂಡ ವಶಕ್ಕೆ ಪಡೆದುಕೊಂಡಿದೆ. ಆರೋಪಿಗಳಾದ ವೆಂಕಟೇಶ್ ಮತ್ತು ರಾಘವೇಂದ್ರನನ್ನು ಸಿಐಡಿ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

ಹಗರಿಬೊಮ್ಮನಹಳ್ಳಿ ಠಾಣೆಯ ಪೊಲೀಸದಾದ ವೆಂಕಟೇಶ್ ಮತ್ತು ರಾಘವೇಂದ್ರ ಅವರನ್ನು ಲಾಕಪ್ ಡೆತ್ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗಿದೆ. ಸಿಐಡಿ ಡಿವೈಎಸ್ಪಿ ಗೋಪಾಲಕೃಷ್ಣ ನೇತೃತ್ವದಲ್ಲಿ ಆರೋಪಿಗಳ ವಿಚಾರಣೆ ನಡೆದಿದ್ದು, ಪ್ರಕರಣದ ಕುರಿತು ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕತೊಡಗಿದ್ದಾರೆ. ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಲಾಕ್ ಅಪ್ ಡೆತ್ ಗೆ ಕಾರಣವೇನು ಎನ್ನುವುದರ ಬಗ್ಗೆ ಸಿಐಡಿ ತನಿಖೆ ಕೈಗೊಂಡಿದೆ. ಪ್ರಕರಣದಲ್ಲಿ ಆರೋಪಿಗಳ ಪಾತ್ರದ ಬಗ್ಗೆ ವಿಚಾರಣೆ ನಡೆಸಲಿದೆ ಮಾಹಿತಿ ಆಧಾರದ ಮೇಲೆ ಮುಂದಿನ ಕ್ರಮಕ್ಕೆ ಸಿಐಡಿ ಸಿದ್ದತೆ ಕೈಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 1 ರಂದು ಕೌಟುಂಬಿಕ ಕಲಹದ ವಿಚಾರಣೆಗೆ ಕರೆತರಲಾಗಿದ್ದ ಸಿ. ಖಲೀಲ್ ಉಲ್ಲಾ(38) ಎಂಬ ಕಟ್ಟಡ ಕಾರ್ಮಿಕ ಲಾಕಪ್‌ ನಲ್ಲಿ ಮೃತಪಟ್ಟಿದ್ದು, ಇದು ಪೊಲೀಸರ ಹಲ್ಲೆಯಿಂದ ಸಂಭವಿಸಿದ ಲಾಕಪ್‌ ಡೆತ್‌ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಬಂಧಿಸಲಾಗಿದ್ದು, ತನಿಖೆಯನ್ನು ಸಿಐಡಿಗೆ(CID) ವಹಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular