BREAKING: ಲಾಕಪ್ ಡೆತ್ ಆರೋಪ: ಆಕ್ರೋಶಗೊಂಡ ಸಂಬಂಧಿಕರಿಂದ ತಡರಾತ್ರಿ ಪೊಲೀಸ್ ಠಾಣೆಗೆ ಮುತ್ತಿಗೆ: ಚನ್ನಗಿರಿಯಲ್ಲಿ ಬಿಗುವಿನ ವಾತಾವರಣ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಮೃತಪಟ್ಟಿದ್ದು, ಉದ್ರಿಕ್ತಗೊಂಡ ಸಂಬಂಧಿಕರು ಪೊಲೀಸ್ ಠಾಣೆ, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಚನ್ನಗಿರಿಯ ಟಿಪ್ಪುನಗರ ನಿವಾಸಿ ಆದಿಲ್ ಎಂಬಾತ ಮಟ್ಕಾ ನಡೆಸುತ್ತಿದ್ದ ಆರೋಪದ ಮೇಲೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು. ನಿನ್ನೆ ಸಂಜೆ ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದ ಸಂದರ್ಭದಲ್ಲಿ ಲೋ ಬಿಪಿಯಾಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಪೊಲೀಸರೇ ಹಲ್ಲೆ ನಡೆಸಿದ್ದಾರೆ ಎಂದು ಮೃತನ ಸಂಬಂಧಿಕರು ಆರೋಪಿಸಿ ವಾಗ್ವಾದ ನಡೆಸಿದ್ದಾರೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದ್ದು, ಚನ್ನಗಿರಿಯಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ತಡರಾತ್ರಿ ಪೊಲೀಸ್ ವಾಹನದ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read