ಮಂಡ್ಯ: ಎಂ.ಕೆ.ದೊಡ್ಡಿಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಸೇರಿ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಚನ್ನಪಟ್ಟಣದ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು. ಕಳ್ಳತನ ಕೇಸ್ ನಲ್ಲಿ ಬಂಧಿತನಾಗಿದ್ದ ಆರೋಪಿ ರಮೇಶ್ ಠಾಣೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಈ ಪ್ರಕರಣ ಸಂಬಂಧ ನಾಲ್ವರು ಪೊಲೀಸರನ್ನು ಅಮಾನತುಮಾಡಲಾಗಿದೆ.
ಕರ್ತವ್ಯಲೋಪ ಹಿನ್ನೆಲೆಯಲ್ಲಿ ಎ ಎಸ್ ಐ ನಾಗರಾಜು, ಕಾನ್ ಸ್ಟೇಬಲ್ ಗಳಾದ ಲಕ್ಷ್ಮೀನಾರಾಯಣ, ಪ್ರತಾಪ್, ಸೋಮನಾಥ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.