HomeKarnatakaಪೋಷಕರೇ ಗಮನಿಸಿ…! ಅನೈತಿಕ ಚಟುವಟಿಕೆ ಲಾಡ್ಜ್ ಮೇಲೆ ಪೊಲೀಸ್ ದಾಳಿ ವೇಳೆ ವಿದ್ಯಾರ್ಥಿಗಳು ಪತ್ತೆ

ಪೋಷಕರೇ ಗಮನಿಸಿ…! ಅನೈತಿಕ ಚಟುವಟಿಕೆ ಲಾಡ್ಜ್ ಮೇಲೆ ಪೊಲೀಸ್ ದಾಳಿ ವೇಳೆ ವಿದ್ಯಾರ್ಥಿಗಳು ಪತ್ತೆ

ಶಿವಮೊಗ್ಗ: ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಲಾಡ್ಜ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ.

ಶಿವಮೊಗ್ಗ ನಗರದ ಕೆಆರ್ ಪುರಂ ಬ್ಲೂ ಕ್ರಿಸ್ಟಲ್ ಹೆಸರಿನ ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಸ್ಪರ ಒಪ್ಪಿಗೆ ಮೇರೆಗೆ ವಿದ್ಯಾರ್ಥಿಗಳು ಲಾಡ್ಜ್ ಗೆ ಬಂದಿರುವುದು ಗೊತ್ತಾಗಿದೆ. ಅನೇಕ ಯುವಕ ಯುವತಿಯರು ಲಾಡ್ಜ್ ಗೆ ಬಂದು ಹೋಗುವ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಲಾಡ್ಜ್ ಪರವಾನಿಗೆ ರದ್ದುಪಡಿಸುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular