HomeKarnatakaಲಾಡ್ಜ್ ಗೆ ಬಂದ ವ್ಯಕ್ತಿ ದುಡುಕಿನ ನಿರ್ಧಾರ: ನೇಣು ಹಾಕಿಕೊಂಡು ಆತ್ಮಹತ್ಯೆ

ಲಾಡ್ಜ್ ಗೆ ಬಂದ ವ್ಯಕ್ತಿ ದುಡುಕಿನ ನಿರ್ಧಾರ: ನೇಣು ಹಾಕಿಕೊಂಡು ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಖಾಸಗಿ ಬಸ್ ನಿಲ್ದಾಣ ಎದುರಿನ ಲಾಡ್ಜ್ ವೊಂದರಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಶಿರಸಿ ಮೂಲದ ಜಿತೇಂದ್ರ ಮಹಾಬಲೇಶ್ವರ ನಾಯ್ಕ(33) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮಂಗಳವಾರ ಲಾಡ್ಜ್ ಗೆ ಬಂದ ಜಿತೇಂದ್ರ ರೂಮ್ ಮಾಡಿಕೊಂಡಿದ್ದರು. ಅವರು ಲಾಡ್ಜ್ ಕೊಠಡಿಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೊಸನಗರದಲ್ಲಿ ಬೇಕರಿ ವ್ಯವಹಾರ ನಡೆಸುತ್ತಿದ್ದ ಅವರು ವಿಪರೀತ ಸಾಲ ಮಾಡಿ ಕೊಂಡಿದ್ದರು ಎಂದು ಹೇಳಲಾಗಿದೆ. ಸಾಗರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular