HomeKarnatakaಲಾಡ್ಜ್ ನಲ್ಲಿ ರೂಂ ಬಾಡಿಗೆಗೆ ಪಡೆದಿದ್ದ ವ್ಯಕ್ತಿ ದುಡುಕಿನ ನಿರ್ಧಾರ

ಲಾಡ್ಜ್ ನಲ್ಲಿ ರೂಂ ಬಾಡಿಗೆಗೆ ಪಡೆದಿದ್ದ ವ್ಯಕ್ತಿ ದುಡುಕಿನ ನಿರ್ಧಾರ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ಮೂಲದ ಪ್ರಸನ್ನ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಬಾಳೆಬೈಲಿನಲ್ಲಿರುವ ಲಾಡ್ಜ್ ವೊಂದರಲ್ಲಿ ಎರಡು ದಿನದಿಂದ ರೂಮ್ ಬಾಡಿಗೆ ಪಡೆದಿದ್ದ ಪ್ರಸನ್ನ ಶೆಟ್ಟಿ ಕೊಠಡಿಯ ಬಾಗಿಲು ತೆರೆಯದಿದ್ದಾಗ ರೂಮ್ ಸಿಬ್ಬಂದಿ ಪರಿಶೀಲಿಸಿದ್ದಾರೆ. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಕಾರಣ ಪ್ರಸನ್ನ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular