HomeKarnatakaನಾಳೆ ರಾಜ್ಯಾದ್ಯಂತ ಲೋಕ ಅದಾಲತ್: ಹೈಕೋರ್ಟ್, ಜಿಲ್ಲಾ, ತಾಲೂಕು ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ನಾಳೆ ರಾಜ್ಯಾದ್ಯಂತ ಲೋಕ ಅದಾಲತ್: ಹೈಕೋರ್ಟ್, ಜಿಲ್ಲಾ, ತಾಲೂಕು ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಬೆಂಗಳೂರು: ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜುಲೈ 8 ರಂದು ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿರುವ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಜಿ. ನರೇಂದರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕ ಅದಾಲತ್ ನಲ್ಲಿ ರಾಜಿ ಮಾಡಿಕೊಳ್ಳಬಹುದಾದ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದು. ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮ್ ಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ ಕೇಸ್, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಕೇಸ್ ಗಳು, ಚೆಕ್ ಬೌನ್ಸ್ ಪ್ರಕರಣಗಳು, ವಿಚ್ಛೇದನ ಹೊರತುಪಡಿಸಿದ ವೈವಾಹಿಕ, ಕೌಟುಂಬಿಕ ಪ್ರಕರಣ ಸೇರಿ ರಾಜಿಯಾಗಬಲ್ಲ ಪ್ರಕರಣಗಳನ್ನು ಲೋಕ ಅದಾಲತ್ ನಲ್ಲಿ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular