ಕೋರ್ಟ್ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಲು ಬಯಸುವವರಿಗೆ ಗುಡ್ ನ್ಯೂಸ್: ಡಿ. 9 ರಾಜ್ಯಾದ್ಯಂತ ಏಕಕಾಲಕ್ಕೆ ರಾಷ್ಟ್ರೀಯ ಲೋಕ್ ಅದಾಲತ್

ಬೆಂಗಳೂರು: ರಾಜ್ಯಾದ್ಯಂತ ಡಿ. 9ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳುವ ಈ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದು.

ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಬಯಸಿದಲ್ಲಿ ಮೊದಲೇ ಸಂಬಂಧಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯ ದೇಗುಲ, ಮೊದಲನೇ ಮಹಡಿ, ಸಿದ್ದಯ್ಯ ರಸ್ತೆ, ಬೆಂಗಳೂರು ಅಥವಾ ಟೋಲ್ ಫ್ರೀ ಸಂಖ್ಯೆ 1800 425 90900, ದೂರವಾಣಿ 080 2211875, 22111730, www.kslsa.kar.nic.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read