HomeKarnatakaಸೆ.9 ರಂದು ಬಳ್ಳಾರಿಯಲ್ಲಿ ʼಲೋಕ ಅದಾಲತ್ʼ

ಸೆ.9 ರಂದು ಬಳ್ಳಾರಿಯಲ್ಲಿ ʼಲೋಕ ಅದಾಲತ್ʼ

ಬಳ್ಳಾರಿ:
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮತ್ತು ಬಳ್ಳಾರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ರಾಷ್ಟ್ರೀಯ ಲೋಕ ಅದಾಲತ್ ಸೆ.9 ರಂದು ಬೆಳಿಗ್ಗೆ 10.30ಕ್ಕೆ ಬಳ್ಳಾರಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ/ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಸೆ.9 ರಂದು ಮೆಗಾ-ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೂಚನೆ: ಪ್ರತಿದಿನ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ-ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ನಡೆಯುತ್ತವೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ದೂ.08392-278077 ಹಾಗೂ ಇ-ಮೇಲ್ [email protected] ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular